"ಆದಕಾರಣ ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟಿರುವದರಿಂದ ಮೇಲಿರುವವುಗಳನ್ನು ಹುಡುಕಿರಿ; ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಆಸನಾರೂಢನಾಗಿದ್ದಾನೆ. ಮೇಲಿರುವಂಥವುಗಳ...